ADVERTISEMENT

ಚಿಣಮಗೇರಾ: ಸಾಂಬಾರ ಪಾತ್ರೆಯಲ್ಲಿ ಬಿದ್ದು ಗಾಯಗೊಂಡ ವಿದ್ಯಾರ್ಥಿನಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2023, 14:00 IST
Last Updated 17 ನವೆಂಬರ್ 2023, 14:00 IST
<div class="paragraphs"><p>ಸಾಂಬಾರ ಪಾತ್ರೆಯಲ್ಲಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿ ಮಹಾಂತಮ್ಮ ಚಿಕಿತ್ಸೆ ‌ಪಡೆಯುತ್ತಿರುವುದು</p></div>

ಸಾಂಬಾರ ಪಾತ್ರೆಯಲ್ಲಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿ ಮಹಾಂತಮ್ಮ ಚಿಕಿತ್ಸೆ ‌ಪಡೆಯುತ್ತಿರುವುದು

   

ಕಲಬುರಗಿ: ಅಫಜಲಪುರ ತಾಲ್ಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ವಿದ್ಯಾರ್ಥಿನಿ ಮಹಾಂತಮ್ಮ ಜಮಾದಾರ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಲಾಲಬಿ ನದಾಫ ಹಾಗೂ ಸಹ ಶಿಕ್ಷಕ ರಾಜು ಚವ್ಹಾಣ ಅವರನ್ನು ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಮುಖ್ಯ ಅಡುಗೆ ಸಿಬ್ಬಂದಿ ಕಸ್ತೂರಿಬಾಯಿ ಎಂ. ತಳಕೇರಿ ಅವರನ್ನು ಸೇವೆಯಿಂದ ವಜಾ ಮಾಡಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಗುರುವಾರ ಮಧ್ಯಾಹ್ನ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಮಹಾಂತಮ್ಮ ಅಡುಗೆ ಪಾತ್ರೆಯಲ್ಲಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದು, ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಶೇ 40ರಷ್ಟು ಸುಟ್ಟ ಗಾಯಗಳಾಗಿವೆ. ಶಾಲೆಗೆ ಹಾಜರಾಗಿ ಅಡುಗೆ ಕೆಲಸ ಮಾಡಬೇಕಿದ್ದ ಕಸ್ತೂರಿಬಾಯಿ ಅವರು ಅನಧಿಕೃತವಾಗಿ ಗೈರಾಗಿದ್ದರು. ಅಲ್ಲದೇ, ಗೈರು ಹಾಜರಿಯಲ್ಲಿ ಮಕ್ಕಳಿಗೆ ವ್ಯವಸ್ಥಿತವಾಗಿ ಅಡುಗೆ ನೀಡಲು ಯಾವುದೇ ವ್ಯವಸ್ಥೆ ರೂಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಭಾರ ಮುಖ್ಯ ಶಿಕ್ಷಕಿ ಲಾಲಬಿ ನದಾಫ ಅವರು ರಜೆ ಹಾಕಿದ್ದರು. ಅವರ ಸ್ಥಾನದಲ್ಲಿದ್ದು ಕೆಲಸ ನಿರ್ವಹಿಸಬೇಕಾಗಿದ್ದ ಸಹ ಶಿಕ್ಷಕ ರಾಜು ಚವ್ಹಾಣ ಸಹ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.