
ಪ್ರಜಾವಾಣಿ ವಾರ್ತೆ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ–2ರ ವ್ಯಾಪ್ತಿಯ ಅಫಜಲಪುರ ಘಟಕದಿಂದ ಬೆಂಗಳೂರಿಗೆ ಸಿಂದಗಿ, ಮುದ್ದೆಬಿಹಾಳ, ಚಿತ್ರದುರ್ಗ ಮಾರ್ಗವಾಗಿ ಅಮೋಘವರ್ಷ ನಾನ್ ಎ.ಸಿ. ಸ್ಲೀಪರ್ ಬಸ್ ಸೇವೆಯನ್ನು ಫೆ.4ರಂದು ಪ್ರಾರಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಅಫಜಲಪುರದಿಂದ ಬೆಂಗಳೂರಿಗೆ ಸಂಜೆ 5.45 ಗಂಟೆಗೆ, ಬೆಂಗಳೂರಿನಿಂದ ಅಫಜಲಪುರಕ್ಕೆ ರಾತ್ರಿ 8.30ಕ್ಕೆ ಹೊರಡುತ್ತದೆ. ಬುಧವಾರ ಸಂಜೆ 4 ಗಂಟೆಗೆ ಅಫಜಲಪುರ ಬಸ್ ನಿಲ್ದಾಣದಲ್ಲಿ ಶಾಸಕ ಎಂ.ವೈ.ಪಾಟೀಲ, ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಚಾಲನೆ ನೀಡುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.