ADVERTISEMENT

ಕಾಳಗಿ: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 3:32 IST
Last Updated 17 ಮೇ 2022, 3:32 IST
ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ನೋಟಬುಕ್ ವಿತರಿಸಿ ಬರಮಾಡಿಕೊಳ್ಳಲಾಯಿತು
ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ನೋಟಬುಕ್ ವಿತರಿಸಿ ಬರಮಾಡಿಕೊಳ್ಳಲಾಯಿತು   

ಕಾಳಗಿ: ತಾಲ್ಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಆರಂಭಿಸುವ ಮೂಲಕ 2022-23ನೇ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು.

ಕಾಳಗಿ, ಕೊಡದೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಅರಣಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಂಗಲಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಳಗಿ ಸರ್ಕಾರಿ ಪ್ರೌಢ ಶಾಲೆ, ಸಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡ್ಲಿ ಸರ್ಕಾರಿ ಪ್ರೌಢ ಶಾಲೆ, ಕಲ್ಲಹಿಪ್ಪರ್ಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ಬಹುತೇಕ ಶಾಲೆಗಳ ಪ್ರವೇಶದ್ವಾರವನ್ನು ತಳಿರು–ತೋರಣಗಳಿಂದ ಸಿಂಗರಿಸಲಾಗಿತ್ತು.

ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಶಾಲೆಗಳ ಪ್ರವೇಶದ್ವಾರದಲ್ಲೇ ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದರೆ, ಮಕ್ಕಳಿಗೆ ಹೂವಿನದಳ ಚೆಲ್ಲಿ, ಆರತಿ ಬೆಳಗಿ, ನೋಟ್ ಬುಕ್ ವಿತರಿಸಿದರು. ಮತ್ತೆ ಕೆಲವೆಡೆ ಸರಸ್ವತಿ ಭಾವಚಿತ್ರದ ಪೂಜೆ ಮಾಡಿ, ಶಾಲಾರಂಭಕ್ಕೆ ಶುಭ ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.