ADVERTISEMENT

ಕಲಬುರಗಿ: ತಿಪ್ಪಣ್ಣ ಸಿರಸಗಿ ಮನೆಯ ಮೇಲೂ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 11:05 IST
Last Updated 17 ಜೂನ್ 2022, 11:05 IST
ಕಲಬುರಗಿಯ ಕೆೆೆೆಎಚ್‌ಬಿ ಕಾಲೊನಿಯಲ್ಲಿರುವ ತಿಪ್ಪಣ್ಣ ಸಿರಸಗಿ ಮನೆ
ಕಲಬುರಗಿಯ ಕೆೆೆೆಎಚ್‌ಬಿ ಕಾಲೊನಿಯಲ್ಲಿರುವ ತಿಪ್ಪಣ್ಣ ಸಿರಸಗಿ ಮನೆ   

ಕಲಬುರಗಿ: ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಪ್ಪಣ್ಣ ಸಿರಸಗಿ ಅವರ ಕಲಬುರಗಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಹೈಕೋರ್ಟ್ ಪೀಠದ ಪಕ್ಕದಲ್ಲಿರುವ ಅಕ್ಕಮಹಾದೇವಿ ಬಡಾವಣೆಯ ಕೆಎಚ್‌ಬಿ ಕಾಲೊನಿಯ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ತಿಪ್ಪಣ್ಣ ಸಿರಸಗಿ ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಲಬುರ್ಗಿ ತಾಲ್ಲೂಕು ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ADVERTISEMENT

ನೌಕರಿ ಕೊಡಿಸುವುದಾಗಿ ಹಲವರಿಂದ ಹಣ ತೆಗೆದುಕೊಂಡಿರುವ ಆರೋಪಗಳು ಕೇಳಿ ಬಂದಿದ್ದರಿಂದ ಸಿರಸಗಿ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು.

ಬೆಳಿಗ್ಗೆ ಮನೆಯ ಮೇಲೆ ದಾಳಿ ಮಾಡಿದ ಅಧಿಕಾರಿಗಳು, ಮನೆಯ ಸದಸ್ಯರೆಲ್ಲರ ಸಮ್ಮುಖದಲ್ಲಿ ಹಲವಾರು ದಾಖಲೆ ಪತ್ರಗಳು, ಬಂಗಾರದ ಆಭರಣ ಹಾಗೂ ಐಷಾರಾಮಿ ವಸ್ತುಗಳ ವಶ ಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಎರಡು ಬೈಕ್, ಕಾರು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.