ADVERTISEMENT

ಜೇವರ್ಗಿ | ಅಪಘಾತ ಪರಿಹಾರ ನೀಡಲು ವಿಫಲ: ಬಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 2:42 IST
Last Updated 7 ಫೆಬ್ರುವರಿ 2026, 2:42 IST
ಜೇವರ್ಗಿ : ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಪರಿಹಾರ ನೀಡದ ಹಿನ್ನಲೆಯಲ್ಲಿ ಎರಡು ಸಾರಿಗೆ ಸಂಸ್ಥೆ ಬಸ್ ಗಳನ್ನು ಜಪ್ತಿ ಮಾಡಲಾಯಿತು.
ಜೇವರ್ಗಿ : ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಪರಿಹಾರ ನೀಡದ ಹಿನ್ನಲೆಯಲ್ಲಿ ಎರಡು ಸಾರಿಗೆ ಸಂಸ್ಥೆ ಬಸ್ ಗಳನ್ನು ಜಪ್ತಿ ಮಾಡಲಾಯಿತು.   

ಜೇವರ್ಗಿ: ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಎರಡು ಬಸ್‌ಗಳನ್ನು ಶುಕ್ರವಾರ ಜಪ್ತಿ ಮಾಡಲಾಗಿದೆ.

ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರು, ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದರು. ಆದರೆ, ಇಲಾಖೆಯ ಅಧಿಕಾರಿಗಳು ಗಮನ ಹರಿಸದ ಹಿನ್ನೆಲೆ ಬಸ್‌ಗಳನ್ನು ಜಪ್ತಿ ಮಾಡಲಾಗಿದೆ.

ಏನಿದು ಪ್ರಕರಣ: 2023ರ ಫೆ.13ರಂದು ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಿಗೆ ಇಲಾಖೆಯ ಬಸ್ ಅಪಘಾತವಾಗಿ ಹಳ್ಳೆಮ್ಮ ಎಂಬುವರ ಮಗ ಮೃತಪಟ್ಟಿದ್ದರು. ಪ್ರಕರಣ ದಾಖಲು ಮಾಡಿ, ಹಳ್ಳೆಮ್ಮ ನ್ಯಾಯಾಲಯದ ಮೊರೆ ಹೋಗಿದ್ದರು. ಮೂರು ವರ್ಷಗಳ ನಂತರ ಜೇವರ್ಗಿ ಹಿರಿಯ ಶ್ರೇಣಿ ನ್ಯಾಯಾಲಯ ₹ 28.40 ಲಕ್ಷ  ಪರಿಹಾರ ಘೋಷಣೆ ಮಾಡಿತ್ತು. 2023 ಎಪ್ರಿಲ್‌ 10ರಂದು ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ ಅಪಘಾತವಾಗಿ ಹರನೂರ ಗ್ರಾಮದ ಮಹಾಂತಯ್ಯ ಸ್ವಾಮಿ ಮೃತಪಟ್ಟಿದ್ದರು. ಅವರ ಪತ್ನಿ ಪರಿಹಾರ ಕೋರಿ ಜೇವರ್ಗಿ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯ ಅರ್ಜಿ ಪುರಸ್ಕರಿಸಿ ₹18 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ನ್ಯಾಯಾಲಯದ ಆದೇಶ ಪಾಲನೆ ಮಾಡದೇ ಇರುವುದರಿಂದ ಎರಡೂ ಬಸ್‌ಗಳ ಜಪ್ತಿಗೆ ಆದೇಶಿಸಿತ್ತು. ಅರ್ಜಿದಾರರ ಪರವಾಗಿ ಸಿದ್ದಣ್ಣ ಕಲ್ಲೂರು ವಕೀಲರು ವಾದ ಮಾಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.