ADVERTISEMENT

ಕಲಬುರ್ಗಿ | ಬೈಕುಗಳ ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 0:53 IST
Last Updated 24 ಜೂನ್ 2020, 0:53 IST

ಕಲಬುರ್ಗಿ: ಜಿಲ್ಲೆಯ ಸೇಡಂ ಪಟ್ಟಣದ ಸಿಮೆಂಟ್‌ ಕಾರ್ಖಾನೆ ರಸ್ತೆಯಲ್ಲಿ ಮಂಗಳವಾರ ಸಂಜೆ ಬೈಕುಗಳು ಮುಖಾಮುಖಿ ಡಿಕ್ಕಿ ಆಗಿ ಒಬ್ಬ ಸವಾರ ಮೃತಪಟ್ಟಿದ್ದಾರೆ.

ಮೈನುದ್ದಿನ್ (43) ಮೃತಪಟ್ಟವರು. ಸೋಮವಾರ ಬೆಳಿಗ್ಗೆ ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿಗೆ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆಯಿತು. ತೀವ್ರ ಗಾಯಗೊಂಡಿದ್ದ ಮೈನುದ್ದಿನ್‌ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಐ ರಾಜಶೇಖರ ಹಳಿಗೋಧಿ, ಪಿಎಸ್‍ಐ ಸುಶೀಲಕುಮಾರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.