ADVERTISEMENT

ಅಪಘಾತ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 15:26 IST
Last Updated 9 ಡಿಸೆಂಬರ್ 2020, 15:26 IST

ಕಮಲಾಪುರ: ಪಟ್ಟಣದ ಪೊಲೀಸ್ ಠಾಣೆ ಎದುರು ಕಾರು- ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಕಲಬುರ್ಗಿ ತಾಲ್ಲೂಕಿನ ಕೆರೆ ಭೋಸಗಾದ ಸಚಿನ್ ನಾಗಣ್ಣ ಚಲವಾದಿ (23) ಮೃತಪಟ್ಟವರು.

ಮಂಗಳವಾರ ಹುಮನಾಬಾದ್‍ಗೆ ತೆರಳಿದ್ದ ಸಚಿನ್ ತಮ್ಮ ಅಳಿಯನ ಬೈಕ್ ತೆಗೆದುಕೊಂಡು ಕೆರೆ ಭೋಸಗಾಕ್ಕೆ ಮರಳುತ್ತಿದ್ದರು. ಕಲಬುರ್ಗಿಯಿಂದ ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಇವರನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.