ಕಲಬುರಗಿ: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಪ್ರದೇಶದಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಅವರನ್ನು ಬೀದರ್ ಜಿಲ್ಲೆಯ ಕೇಂದ್ರ ಕಾರಾಗೃಹಕ್ಕೆ ಹಸ್ತಾಂತರಿಸಿದ್ದಾರೆ.
ಸಬರ್ಬನ್ ಠಾಣೆಯ ಪೊಲೀಸರು ಸಲ್ಮಾನ್ ಬೇಗ್, ಸರ್ಫರಾಜ್ ಬೇಗ್, ಮುನಾವರ್ ಬೇಗ್ ಮತ್ತು ಕೌಸರ್ ಬೇಗ್‌ನನ್ನು ಬಂಧಿಸಿದ್ದಾರೆ. ವಿಶ್ವವಿದ್ಯಾಲಯ ಠಾಣೆಯ ಪೊಲೀಸರು ಸರ್ವತ್ ಅಲಿ ಕಾಸಿಂನನ್ನು ಬಂಧಿಸಿದ್ದಾರೆ. ಈ ಐವರು ರೌಡಿಶೀಟರ್‌ಗಳಾಗಿದ್ದು, ಕೊಲೆ, ಸುಲಿಗೆ, ದರೋಡೆ ಮಾಡುವ ಪ್ರವೃತ್ತಿಯವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಶ್ವವಿದ್ಯಾಲಯ ಠಾಣೆಯ ಮತ್ತೊಂದು ಪ್ರಕರಣದಲ್ಲಿ ಕೈಫ್ ಬೇಗ್ ಮತ್ತು ಮೊಹಮದ್ ಅಹಮದ್‌ನನ್ನು ಬಂಧಿಸಿದ್ದಾರೆ. ಆರೋಪಿಗಳು ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಸಂಶಯಾಸ್ಪದವಾಗಿ ಓಡಾಡುತ್ತಿದ್ದರು. ಅಪರಾಧಗಳು ಮಾಡುವ ಸಾಧ್ಯತೆ ಇರುವುದರಿಂದ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.