ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಆರೋಪಿಗಳಿಗೆ 10 ದಿನ ಸಿಐಡಿ ಕಸ್ಟಡಿ

​ಪ್ರಜಾವಾಣಿ ವಾರ್ತೆ
Published 4 ಮೇ 2022, 13:14 IST
Last Updated 4 ಮೇ 2022, 13:14 IST
ಪಿಎಸ್ಐ ನೇಮಕಾತಿ ಅಕ್ರಮ
ಪಿಎಸ್ಐ ನೇಮಕಾತಿ ಅಕ್ರಮ   

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಅಭ್ಯರ್ಥಿ ಪ್ರಭು, ಅವರ ತಂದೆ ಶರಣಪ್ಪ ಹಾಗೂ ಅಕ್ರಮಕ್ಕೆ ಸಾಥ್ ನೀಡಿದ ಚಂದ್ರಕಾಂತ ‌ಕುಲಕರ್ಣಿ ಅವರಿಗೆ ‌ಇಲ್ಲಿ‌ನ ಮೂರನೇ ಜೆಎಂಎಫ್ ನ್ಯಾಯಾಲಯವು 10 ದಿನಗಳವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಆರೋಪಿಗಳಾದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಚಿಲ್, ಅಮರ್ಜಾ ನೀರಾವರಿ ಯೋಜನೆ ಸಹಾಯಕ ಎಂಜಿನಿಯರ್ ‌ಮಂಜುನಾಥ ಮೇಳಕುಂದಿ ‌ಹಾಗೂ ಅಭ್ಯರ್ಥಿ ಶ್ರೀಧರ ಪವಾರ ಅವರನ್ನು ಎಂಟು ದಿನಗಳವರೆಗೆ ಸಿಐಡಿ ವಶಕ್ಕೆ ಒಪ್ಪಿಸಿ ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಆದೇಶಿಸಿದರು.

ಸಿಐಡಿ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ವಾದ ಮಂಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.