ADVERTISEMENT

ಚುನಾವಣೆ ಹಿನ್ನೆಲೆ ರೌಡಿಗಳ ಮೇಲೆ ನಿಗಾ: ಅಲೋಕ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2023, 6:26 IST
Last Updated 5 ಜನವರಿ 2023, 6:26 IST
ಅಲೋಕ್‌ ಕುಮಾರ್
ಅಲೋಕ್‌ ಕುಮಾರ್   

ಕಲಬುರಗಿ: ‘ರಾಜ್ಯ ವಿಧಾನಸಭಾ ಚುನಾವಣೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ’ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್ ಹೇಳಿದರು.

‘ಐದು ವರ್ಷಗಳಿಂದ ಐದಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ರೌಡಿಗಳ ಮೇಲೆ ನಿಗಾ ವಹಿಸಲಾಗಿದೆ. ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ‌ ಕೈಗೊಳ್ಳಲಾಗುವುದು’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ರೌಡಿಗಳು ಯಾವುದೇ ಪಕ್ಷದಲ್ಲಿ ಇರಲಿ ಅಥವಾ ಸೇರಿರಲಿ, ಪೊಲೀಸ್‌ ಇಲಾಖೆ ಮಾತ್ರ ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಟುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ. ಬಂದೂಕು ಪರವಾನಗಿ ಪಡೆದವರ ಪಟ್ಟಿ ಪರಿಶೀಲನೆ‌ಯ ಜತೆಗೆ ಯಾವ ಉದ್ದೇಶಕ್ಕಾಗಿ ಪಡೆಯಲಾಗಿದೆ ಎಂಬುದನ್ನು ಸಹ ಅವಲೋಕಿಸಲಾಗುವುದು.‌ ವಾರಂಟ್‌ಗೆ ಉತ್ತರಿಸದವರ ಪತ್ತೆಗೂ ಕಠಿಣ ಕ್ರಮ ಕೈಗೊ ಳ್ಳಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.