ADVERTISEMENT

ಅಫಜಲಪುರ | ರೈತ ಸಂಪರ್ಕ ಕೇಂದ್ರಗಳಲ್ಲಿ ಇ–ಕೆವೈಸಿ ಆರಂಭ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 7:40 IST
Last Updated 25 ಫೆಬ್ರುವರಿ 2026, 7:40 IST
ಅಫಜಲಪುರ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಇ–ಕೆವೈಸಿ ಮಾಡುತ್ತಿರುವುದು
ಅಫಜಲಪುರ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಇ–ಕೆವೈಸಿ ಮಾಡುತ್ತಿರುವುದು   

ಅಫಜಲಪುರ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ತಮ್ಮ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳುವುದು ಅಗತ್ಯವಾಗಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಎಸ್.ಗಡಿಗಿಮನಿ ಹಾಗೂ ಕೃಷಿ ಅಧಿಕಾರಿ ಆನಂದ ಅವರಾದ ತಿಳಿಸಿದರು.

ಈ ಕುರಿತು ಮಾಹಿತಿ ‘ಪ್ರಜಾವಾಣಿ’ಗೆ ಮಾಹಿತಿ ನೀಡುವರು ಈಗಾಗಲೇ ತಾಲ್ಲೂಕಿನ ಅತನೂರು, ಕರಜಿಗಿ ಹಾಗೂ ಅಫಜಲಪುರ ಸಂಪರ್ಕ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಇ–ಕೆವೈಸಿ ಮಾಡಿಕೊಳ್ಳುವುದು ಆರಂಭವಾಗಿದೆ. ತಪ್ಪದೆ ರೈತರು ತಮ್ಮ ತಮ್ಮ ವ್ಯಾಪ್ತಿಗೆ ಬರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯಗಳನ್ನು ದಾಖಲೆಗಳನ್ನು ನೀಡಿ ಇ–ಕೆವೈಸಿ ಮಾಡಿಕೊಳ್ಳಬೇಕು’ ಎಂದು ಕೋರಿದರು.

‘ಪಹಣಿ, ಖಾತೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ವಿವರಗಳಲ್ಲಿ ಹೊಂದಾಣಿಕೆ ಇಲ್ಲದಿರುವುದರಿಂದ ಪಿಎಂ ಕಿಸಾನ್ ಸೇರಿದಂತೆ ಹಲವು ಯೋಜನೆಗಳ ಅನುದಾನ ಪಡೆಯಲು ರೈತರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ರೈತರು ತಕ್ಷಣ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಸಿಕೊಳ್ಳಬೇಕು’ ಎಂದರು.

ADVERTISEMENT

‘ಭೂ ದಾಖಲೆಗಳಲ್ಲಿ ದೋಷಗಳಿದ್ದರೆ ಹತ್ತಿರದ ನಾಡ ಕಚೇರಿ, ಗ್ರಾಮ ಪಂಚಾಯಿತಿ ಅಥವಾ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬೇಕು. ದಾಖಲೆಗಳು ಸರಿಯಾಗಿದ್ದರೆ ಮಾತ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಲಭಿಸುತ್ತವೆ’ ಎಂದರು.

ಈ ವೇಳೆ ಅನುಗಾರರಾದ ಲಿಂಗರಾಜ ಸಗರ್, ಸುಭಾಷ್ ಕಾಂಬಳೆ, ಮಡಿವಾಳಪ್ಪ ಹೋಳ್ಕರ್, ಸಿದ್ದು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.