ಅಫಜಲಪುರ: ತಾಲ್ಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿ ಶನಿವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಭಾಗೇಶ ಬುರುಡ (20) ಎಂಬ ವಿದ್ಯಾರ್ಥಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದರು. ಸೋಮವಾರ ಬೆಳಿಗ್ಗೆ ಆಲಮೇಲ ತಾಲೂಕಿನ ದೇವಣಗಾವ್ ಹತ್ತಿರದ ಭೀಮ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.
ಸೋಮವಾರ ಬೆಳಿಗ್ಗೆ ದೇವಣಗಾವ್ ಗ್ರಾಮದ ಹತ್ತಿರ ಭೀಮಾನದಿಯಲ್ಲಿ ಶವ ತೇಲುತ್ತಿರುವುದನ್ನು ದೇವಣಗಾವ್ ಗ್ರಾಮಸ್ಥರು ತಾಲ್ಲೂಕ ಆಡಳಿತಕ್ಕೆ ದೂರವಾಣಿ ಕರೆ ಮಾಡಿದ್ದರಿಂದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಶವವನ್ನು ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ವಿದ್ಯಾರ್ಥಿಯ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದಾರೆ. ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.