ಅಫಜಲಪುರ: ತಾಲ್ಲೂಕಿನ ಬಿದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಅವ್ಯವಹಾರ ಆರೋಪದಡಿ ದೇವಲಗಾಣಗಾಪುರದ ಪೊಲೀಸ್ ಠಾಣೆಯಲ್ಲಿ ಪ್ರಕಟ ದಾಖಲಾಗಿದೆ.
‘ಬಿದನೂರು ಗ್ರಾ.ಪಂ. ಅಧ್ಯಕ್ಷ ಶಿವಾನಂದ ಮೇಳಕುಂದಿ, ಪಿಡಿಒ ಮಹಾಂತೇಶ್ ತಳವಾರ್ 2023-24 ಮತ್ತು 2024-25ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕ್ರಿಯಾಯೋಜನೆ ತಯಾರಿಸದೇ ಚೆಕ್ ಮುಖಾಂತರ ₹52,92,927 ಅವ್ಯವಹಾರ ಮಾಡಿದ್ದಾರೆ. ಪಿಡಿಒ ಮಹಾಂತೇಶ್ ತಳವಾರ್ ಈ ಹಿಂದೆ 4 ಬಾರಿ ಅಮಾನತ್ತುಗೊಂಡಿದ್ದಾರೆ. ಆದರೆ ಮತ್ತೆ ಬಿದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸೇರಿ ಅವ್ಯವಹಾರ ಮಾಡಿರುವುದರಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯಂತೆ ಅವರಿಬ್ಬರ ಮೇಲೆ ದೇವಲ ಗಾಣಗಾಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲ ಮಾಡಲಾಗಿದೆ’ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ತಿಳಿಸಿದರು.
ಎರಡು ದಿನಗಳ ಹಿಂದೆ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಹಣ ಲೂಟಿ ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಗ್ರಾಮಸ್ಥರು ಗೊಳಿಸಬೇಕೆಂದು ಧರಣಿ ನಡೆಸಿದರು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.