ADVERTISEMENT

ಅಫಜಲಪುರ | ಬಾಲಕಿ ಮೇಲೆ ಅತ್ಯಾಚಾರ: ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 6:11 IST
Last Updated 10 ಸೆಪ್ಟೆಂಬರ್ 2025, 6:11 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಅಫಜಲಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಾತು ಬಾರದ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ 18 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ. 

ADVERTISEMENT

‘ಪಕ್ಕದ ಮನೆಯ ಯುವಕನು ಭಾನುವಾರ ಮಧ್ಯಾಹ್ನ ನಮ್ಮ ಮಗಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆ ಅಳುತ್ತಿದ್ದಾಳೆ ಎಂದು ಆತನೇ ಕರೆದುಕೊಂಡು ಬಂದು ಮನೆಯ ಮುಂದೆ ಬಿಟ್ಟು ಹೋಗಿದ್ದಾನೆ’ ಎಂದು ಬಾಲಕಿಯ ಪೋಷಕರು ಗಾಣಗಾಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. 

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.