
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಅಫಜಲಪುರ: ಪಟ್ಟಣದ ಕಲಬುರಗಿ ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ದುಧನಿ ರಸ್ತೆಯ ಅಳ್ಯಾಳ ಕ್ರಾಸ್ ಸಮೀಪ ಶುಕ್ರವಾರ ಲಾರಿ ಮತ್ತು ಸ್ಕೂಟರ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಪಟ್ಟಣದ ನಿವಾಸಿ, ಸ್ಕೂಟರ್ ಸವಾರ ಅನ್ವರ್ ಶೇಖ್ (40) ಮೃತಪಟ್ಟಿದ್ದಾರೆ.
ಸ್ಕೂಟರ್ ಹಿಂಬದಿ ಕುಳಿತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಕಲಬುರಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟ ಅನ್ವರ್ ಶೇಖ್ ಸಂಬಂಧಿಕರಿಗೆ ಮಗಳ ಮದುವೆಯ ಆಮಂತ್ರಣ ನೀಡಲು ಮಹಾರಾಷ್ಟ್ರದ ದುಧನಿಗೆ ಹೋಗುತ್ತಿದ್ದರು. ಈ ವೇಳೆ ದುಧನಿಯಿಂದ ಅಫಜಲಪುರಕ್ಕೆ ಬರುತ್ತಿದ್ದ ಸಿಮೆಂಟ್ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ’ ಎಂದು ತಿಳಿದು ಬಂದಿದೆ.
ಈ ಕುರಿತು ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.