ಅಫಜಲಪುರ: 2025-26ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಆ.25ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟಬಾಲ್ ಖೋಖೋ, ಕಬಡ್ಡಿ, ಥೋಬಾಲ್ ಯೋಗ ಕ್ರೀಡೆಗಳು ನಡೆಯಲಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ವ-ಇಚ್ಛೆಯಿಂದ ಭಾಗವಹಿಸಬಹುದಾಗಿದೆ. ತೀರ್ಪುಗಾರರ ತಿರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ ಗಂಗನಳ್ಳಿ ಮೊ. 99007–82260 ಮತ್ತು ರಾಜು ಚವ್ಹಾಣ್ ಮೊ.70191–67243 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.