ADVERTISEMENT

‘ನವೆಂಬರ್‌ ಮಧ್ಯಭಾಗದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ’

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2019, 9:21 IST
Last Updated 25 ಅಕ್ಟೋಬರ್ 2019, 9:21 IST
ಗುಲಬರ್ಗಾ ಸಂಸದ ಡಾ.ಉಮೇಶ ಜಾಧವ ಅವರು ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್‌ ಖರೋಲ ಅವರೊಂದಿಗೆ ಮಾತುಕತೆ ನಡೆಸಿದರು
ಗುಲಬರ್ಗಾ ಸಂಸದ ಡಾ.ಉಮೇಶ ಜಾಧವ ಅವರು ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್‌ ಖರೋಲ ಅವರೊಂದಿಗೆ ಮಾತುಕತೆ ನಡೆಸಿದರು   

ಕಲಬುರ್ಗಿ: ಈ ಭಾಗದ ಜನತೆಯ ಬಹು ನಿರೀಕ್ಷಿತ ಕಲಬುರ್ಗಿ ವಿಮಾನ ನಿಲ್ದಾಣ ನವೆಂಬರ್‌ ಮಧ್ಯಭಾಗದಿಂದ ಕಾರ್ಯಾರಂಭ ಮಾಡಲಿದೆ ಎಂದು ಸಂಸದ ಡಾ.ಉಮೇಶ ಜಾಧವ ಹೇಳಿದರು.

ನವದೆಹಲಿಯಲ್ಲಿ ಗುರುವಾರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್‌ ಖರೋಲಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಆದಷ್ಟು ಬೇಗನೇ ನಿಲ್ದಾಣ ಆರಂಭಿಸುವ ಕುರಿತು ಮಾತುಕತೆ ನಡೆಸಿದರು.

ವಿವಿಧ ಇಲಾಖೆಗಳ ಅನುಮತಿ ಪಡೆಯಲು ಕೊಂಚ ವಿಳಂಬವಾಗಿದೆ. ಈಗಾಗಲೇ ಶೇ 90ರಷ್ಟು ಕಾಮಗಾರಿಗಳು ಮುಕ್ತಾಯವಾಗಿವೆ. ನವೆಂಬರ್‌ 1ರ ರಾಜ್ಯೋತ್ಸವ ದಿನದಂದು ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿತ್ತು. ಆದರೆ, ನವೆಂಬರ್ ಮಧ್ಯಭಾಗದಲ್ಲಿ ವಿಮಾನಗಳು ಹಾರಲಿವೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.