ADVERTISEMENT

ಕೇಂದ್ರ ಸರ್ಕಾರದಿಂದ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಯತ್ನ: ಅನಂತ ಸುಬ್ಬರಾವ್ ಆರೋಪ

ಕಲಬುರ್ಗಿಯಲ್ಲಿ ಎಐಟಿಯುಸಿ ಶತಮಾನೋತ್ಸವ ಸಮಾರಂಭ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 9:10 IST
Last Updated 9 ಜನವರಿ 2021, 9:10 IST
ಎಐಟಿಯುಸಿ ಶತಮಾನೋತ್ಸವ ಸಮಾರಂಭದಲ್ಲಿ ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್ ಮಾತನಾಡಿದರು.
ಎಐಟಿಯುಸಿ ಶತಮಾನೋತ್ಸವ ಸಮಾರಂಭದಲ್ಲಿ ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್ ಮಾತನಾಡಿದರು.   

ಕಲಬುರ್ಗಿ: ‘ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ನಾಶಪಡಿಸಿ ಕೇಂದ್ರ ಸರ್ಕಾರವು ಹಿಂದೂ ರಾಷ್ಟ್ರ ನಿರ್ಮಿಸುವ ವ್ಯವಸ್ಥಿತ ಪ್ರಯತ್ನ ನಡೆಸಿದೆ’ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಸಮಿತಿ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್ ಆರೋಪಿಸಿದರು.

ಕಲಬುರ್ಗಿಯ ಸರ್ ಎಂ.ವಿಶ್ವೇಶ್ವರಯ್ಯ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಎಐಟಿಯುಸಿ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಫ್ಯಾಸಿಸ್ಟ್ ನೀತಿ ಅನುಸರಿಸುತ್ತಿದೆ. ದೇಶದ ಹಿತದೃಷ್ಟಿಯಿಂದ ಇದು ಅಪಾಯಕಾರಿ ಬೆಳವಣಿಗೆ' ಎಂದು ಆತಂಕ ವ್ಯಕ್ತಪಡಿಸಿದರು.

‘ರೈತರ ಮತ್ತು ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರವು ಕಾರ್ಪೊರೇಟ್ ವ್ಯವಸ್ಥೆ ಪರ ಕೆಲಸ ಮಾಡುತ್ತಿದೆ. ಸರ್ಕಾರಿ ಸ್ವಾಯತ್ತ ಸಂಸ್ಥೆಗಳನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಿ, ಬಂಡವಾಳಶಾಹಿಗಳಿಗೆ ಒಪ್ಪಿಸುತ್ತಿದೆ’ ಎಂದು ಟೀಕಿಸಿದರು.

ADVERTISEMENT

‘ಸರ್ಕಾರದ ಈ ಜನವಿರೋಧಿ ಕ್ರಮಗಳನ್ನು ಎಐಟಿಯುಸಿ ತೀವ್ರವಾಗಿ ಖಂಡಿಸುತ್ತದೆ. ಎಲ್ಲಾ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ಧ ಅವಿರತ ಹೋರಾಟ ನಡೆಸಲಿವೆ’ ಎಂದು ಅವರು ಎಚ್ಚರಿಕೆ ನೀಡಿದರು.

‘ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಎಐಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ರೈತರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಎಐಟಿಯುಸಿ ಮುಖಂಡರಾದ ಡಿ.ಎ.ವಿಜಯಭಾಸ್ಕರ್, ಸಿದ್ದಪ್ಪ ಪಾಲ್ಕಿ, ಹಿರಿಯ ವಕೀಲ ಪಿ.ವಿಲಾಸಕುಮಾರ, ಸಿಪಿಐ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ ಇದ್ದರು.

ಕ್ರಮಗಳನ್ನು ಎಐಟಿಯುಸಿ ತೀವ್ರವಾಗಿ ಖಂಡಿಸುತ್ತದೆ. ಎಲ್ಲಾ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ಧ ಅವಿರತ ಹೋರಾಟ ನಡೆಸಲಿವೆ' ಎಂದು ಅವರು ಎಚ್ಚರಿಕೆ ನೀಡಿದರು.

'ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಎಐಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ರೈತರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು' ಎಂದು ಒತ್ತಾಯಿಸಿದರು.

ಎಐಟಿಯುಸಿ ಮುಖಂಡರಾದ ಡಿ.ಎ.ವಿಜಯಭಾಸ್ಕರ್, ಸಿದ್ದಪ್ಪ ಪಾಲ್ಕಿ, ಹಿರಿಯ ವಕೀಲ ಪಿ.ವಿಲಾಸಕುಮಾರ, ಸಿಪಿಐ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.