ADVERTISEMENT

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಜೇವರ್ಗಿ ಶಾಸಕ ಅಜಯ್ ಸಿಂಗ್

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 20:20 IST
Last Updated 14 ಸೆಪ್ಟೆಂಬರ್ 2025, 20:20 IST
ಡಾ.ಅಜಯ್‌ ಸಿಂಗ್‌
ಡಾ.ಅಜಯ್‌ ಸಿಂಗ್‌   

ಕಲಬುರಗಿ: ‘ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. 2018ರಲ್ಲೂ ಆಕಾಂಕ್ಷಿಯಾಗಿದ್ದೆ’ ಎಂದು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ತಿಳಿಸಿದರು.

‘ತಂದೆ ಧರ್ಮಸಿಂಗ್ ಅವರು ಕಠಿಣ ಪರಿಸ್ಥಿತಿಯಲ್ಲಿಯೂ ಪಕ್ಷ ಬಿಟ್ಟು ಹೋಗಲಿಲ್ಲ.  ತಂದೆಯವರಂತೆ ನಾನೂ ಪಕ್ಷ ನಿಷ್ಠನಾಗಿದ್ದೇನೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟರು.

‘ಕೆಕೆಆರ್‌ಡಿಬಿ ಅಧ್ಯಕ್ಷನಾಗಿ ಈ ಭಾಗದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ. ನನ್ನ ಕೆಲಸವನ್ನು ಹೈಕಮಾಂಡ್ ಗಮನಿಸುವ ವಿಶ್ವಾಸವಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.