ADVERTISEMENT

ಆಳಂದ | ಬೆಳೆ ಹಾನಿಗೆ ನೊಂದು ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 7:17 IST
Last Updated 3 ಸೆಪ್ಟೆಂಬರ್ 2025, 7:17 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಆಳಂದ: ತಾಲ್ಲೂಕಿನ ಸೀಡ್ಸ್‌ ಪಾರ್ಮ್‌ ತಾಂಡಾದ ರೈತ ಸುರೇಶ ರಾಮು ಚವ್ಹಾಣ (೩೬) ಅತಿವೃಷ್ಠಿಯಿಂದ ಬೆಳೆಹಾನಿಯಾದ ಹಿನ್ನಲೆಯಲ್ಲಿ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ರೈತ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಸುತ್ತಲಿನ ರೈತರ ೨೨ ಎಕರೆ ಜಮೀನು ಉಳುಮೆ ಮಾಡಿಕೊಂಡಿದ್ದರು. ಬಿತ್ತನೆ ಬೀಜ, ರಸಗೊಬ್ಬರಕ್ಕಾಗಿ ₹ ೨.೬೫ ಲಕ್ಷ ವೆಚ್ಚಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಸಾಲ ಮಾಡಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತನ ಕುಟುಂಬದಲ್ಲಿ ಪತ್ನಿ, ಇಬ್ಬರು ಪುತ್ರರು, ತಾಯಿ ಇದ್ದು. ಆಳಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.