
ಆಳಂದ: ‘ಪ್ರತಿಯೊಬ್ಬ ವಿದ್ಯಾರ್ಥಿಯು ಗುಣಮಟ್ಟದ ಶಿಕ್ಷಣ ಪಡೆದರೆ ಮಾತ್ರ ಸಮಾಜ ಮತ್ತು ವ್ಯಕ್ತಿಯ ಬದುಕಿನಲ್ಲಿ ಪ್ರಗತಿ ಕಾಣಲು ಸಾಧ್ಯವಿದೆ’ ಎಂದು ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಜಿಲ್ಲಾ ಉಪ ನಿರ್ದೇಶಕ ಸುರೇಶ ಅಕ್ಕಣ್ಣ ತಿಳಿಸಿದರು.
ಭಾನುವಾರ ಪಟ್ಟಣದ ರಾಮ ಮನೋಹರ ಲೋಹಿಯಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ವರ್ಷದ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ ಮಾತನಾಡಿ, ‘ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದು ಕಷ್ಟ. ಆದರೆ, ನಿಮ್ಮಲ್ಲಿ ಜ್ಞಾನ, ಕೌಶಲ್ಯ, ಶ್ರದ್ಧೆ ಹಾಗೂ ಶಿಸ್ತು ಇದ್ದರೆ ನೀವೂ ಯಾವದೇ ಕ್ಷೇತ್ರದಲ್ಲಿ ಸಾಧನೆ ಮಾಡಿ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಲು ಸಾಧ್ಯವಿದೆ’ ಎಂದು ಕಿವಿಮಾತು ಹೇಳಿದರು.
ಪ್ರಾಚಾರ್ಯ ನಾಗಣ್ಣಾ ಸಲಗರೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಬುದ್ಧ ಪದವಿ ಕಾಲೇಜಿನ ಪ್ರಾಂಶುಪಾಲ ಸಂಜಯ ಪಾಟೀಲ ಮಾತನಾಡಿದರು. ಸಮತಾ ಲೋಕ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಮಹಾದೇವಪ್ಪ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ಶರಣಬಸಪ್ಪ ಇಟಗಿ, ಶಿವಲಿಂಗಪ್ಪ ಮಂಟಗಿ, ಮೃತ್ಯುಂಜಯ ಪಾಟೀಲ, ಸಂಜೀವಿನಿ ಪಾಟೀಲ, ಸತೀಶ ಮುಲಗೆ ವೇದಿಕೆಯಲ್ಲಿ ಇದ್ದರು. ಅಂಬಿಕಾ ಮುಲಗೆ ನಿರೂಪಿಸಿದರು. ಎನ್. ಟಿ. ಸಲಗರೆ ಸ್ವಾಗತಿಸಿದರು. ಚಂದ್ರಕಲಾ ಅತನೂರೆ ವಂದಿಸಿದರು.
ಉಪನ್ಯಾಸಕರಾದ ನಾಗರಾಜ ಘಂಟೆ, ಸರಸ್ವತಿ ರೆಡ್ಡಿ, ಅಂಬಾರಾಯ ಮುನ್ನೋಳ್ಳಿ ಅವರು ಸಾಂಸ್ಕೃತಿಕ ಚಟುವಟಿಕೆ, ಸ್ಪರ್ಧೆಗಳ ವರದಿ ವಾಚಿಸಿದರು. ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರವೇಶ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಿ ಸನ್ಮಾನಿಸಲಾಯಿತು. ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಪುರಸ್ಕೃತ ಶಿವಲಿಂಗಪ್ಪ ಮಂಟಗಿ ಅವರನ್ನು ಸತ್ಕರಿಸಲಾಯಿತು.
ಪಿಯು ದ್ವಿತೀಯ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆಯುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ವೈದ್ಯಕೀಯ ಮತ್ತು ವೃತ್ತಿಪರ ಶಿಕ್ಷಣಕ್ಕೆ ಸಮತಾ ಲೋಕ ಶಿಕ್ಷಣ ಸಮಿತಿಯಿಂದ ಆರ್ಥಿಕ ನೆರವು ನೀಡಲಾಗುವುದು
–ಆರ್.ಕೆ.ಪಾಟೀಲ ಕಾರ್ಯದರ್ಶಿ ಸಮತಾ ಲೋಕ ಶಿಕ್ಷಣ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.