ADVERTISEMENT

ಹೊಸ ವರ್ಷಾಚರಣೆ; ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 15:26 IST
Last Updated 30 ಡಿಸೆಂಬರ್ 2020, 15:26 IST
ಪೊಲೀಸ್ ಆಯುಕ್ತ ಎನ್.ಸತೀಶಕುಮಾರ
ಪೊಲೀಸ್ ಆಯುಕ್ತ ಎನ್.ಸತೀಶಕುಮಾರ   

ಕಲಬುರ್ಗಿ: ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಕೊರೊನಾ ವೈರಸ್ ಹಾಗೂ ರೂಪಾಂತರ ಕೊರೊನಾ ವೈರಸ್ ಹರಡದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತಹ ಡಿಸೆಂಬರ್ 31ರ ರಾತ್ರಿ 10.30 ಗಂಟೆಯಿಂದ 2021ರ ಜನವರಿ 1ರ ಬೆಳಗಿನ 6.30 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಎನ್.ಸತೀಶಕುಮಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಒಂದೇ ಕಡೆ ಸೇರುವಂತಿಲ್ಲ. ಪಬ್, ಬಾರ್, ರೆಸ್ಟೊರೆಂಟ್‍ಗಳನ್ನು ನಿಗದಿಪಡಿಸಿದ ಸಮಯಕ್ಕೆ ಬಂದ್ ಮಾಡಬೇಕು. ಡಿ.ಜೆ. (ಸೌಂಡ್ ಸಿಸ್ಟಮ್) ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ಪಟಾಕಿಗಳನ್ನು ಹಚ್ಚುವಂತಿಲ್ಲ. ವೀಲಿಂಗ್ ಡ್ರ್ಯಾಗ್ ರೇಸ್‌ ಮುಂತಾದ ಚಟುವಟಿಕೆಗಳಿಗೂ ಅವಕಾಶವಿಲ್ಲ. ಹೊಟೇಲ್, ಬಾರ್, ಪಬ್‍ಗಳಲ್ಲಿ ಜನಸಂಖ್ಯೆ ಜಾಸ್ತಿ ಆಗುವ ಕಾರಣ, ಈಗಾಗಲೇ ಸರ್ಕಾರ ಜಾರಿಗೊಳಿಸಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಹೊಸ ವರ್ಷಾಚರಣೆ ಕೈಗೊಳ್ಳಬೇಕಾದರೆ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಮಾಹಿತಿ ನೀಡಬೇಕು. ನಿಯಮಗಳನ್ನು ಉಲ್ಲಂಸುವವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.