ಕಲಬುರಗಿ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಳಗಿ ಹಾಗೂ ಮೇಳಕುಂದಾ ಗ್ರಾಮಗಳಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಲ್ಯಾಣ ಪಥ ಯೋಜನೆಯಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಸಾವಳಗಿ (ಬಿ) ಗ್ರಾಮದಲ್ಲಿ ಕೆಕೆಆರ್‌ಡಿಬಿಯ ₹40 ಲಕ್ಷ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ಕಲ್ಯಾಣ ಪಥ ಯೋಜನೆಯಡಿ ₹2.41 ಕೋಟಿ ವೆಚ್ಚದ ಸಾವಳಗಿ-ಸಿಂದಗಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಮೇಳಕುಂದ (ಬಿ) ಗ್ರಾಮದಲ್ಲಿ ಕಲ್ಯಾಣ ಪಥ ಯೋಜನೆ ಅಡಿಯಲ್ಲಿ ₹2.79 ಕೋಟಿ ವೆಚ್ಚದ ಮೇಳಕುಂದ (ಬಿ)–ನೀಲೂರು–ಹುಣಸಿಹಡಗಿಲ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.