ADVERTISEMENT

ಯರಗಲ್: ಮೇ2ರಂದು ಅಂಬೇಡ್ಕರ್ ಜಯಂತಿ, ಬಹಿರಂಗ ಸಭೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 14:37 IST
Last Updated 27 ಏಪ್ರಿಲ್ 2025, 14:37 IST

ಚಿತ್ತಾಪುರ: ತಾಲ್ಲೂಕಿನ ಯರಗಲ್ ಗ್ರಾಮದಲ್ಲಿ ಮೇ.2 ರಂದು ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಶಿವಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 8 ಗಂಟೆಗೆ ಯಂಕರೆಡ್ಡಿ ಪೊಲೀಸ್ ಪಾಟೀಲ ಅವರು ಧ್ವಜಾರೋಹಣ ನೆರವೇರಿಸುವರು. ಸಂಜೆ 4 ಗಂಟೆಗೆ ಪಿಎಸ್ಐ ಶ್ರೀಶೈಲ ಅಂಬಾಟಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಅಣದೂರು ವೈಶಾಲಿ ಬುದ್ಧ ವಿಹಾರದ ಭಂತೆ ಧಮ್ಮಾನಂದ ಮಹಾಥೇರೊ, ಕೋಡ್ಲಾದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಭೆ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮಹಾಗಾಂವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕರಿಘೂಳೇಶ್ವರ ಆಗಮಿಸುತ್ತಿದ್ದಾರೆ. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.