ADVERTISEMENT

ಕಲಬುರಗಿ| ಮಹಾ ಪರಿನಿರ್ವಾಣ: ಎಲ್ಲೆಡೆ ಸಂವಿಧಾನ ಶಿಲ್ಪಿಗೆ ನಮನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 8:28 IST
Last Updated 7 ಡಿಸೆಂಬರ್ 2025, 8:28 IST
ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕಲಬುರಗಿಯಲ್ಲಿರುವ ಅಂಬೇಡ್ಕರ್‌ ಪುತ್ಥಳಿಗೆ ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್ ಮಾಲಾರ್ಪಣೆ ಮಾಡಿದರು. ಉದಯ ಬಿ. ಪಾಟೀಲ, ಶರಣು ಭೂಸನೂರ, ಸತೀಶ ಸಾಹು, ನೀಲಕಂಠ ಅವಂಟಿ ಇದ್ದರು
ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕಲಬುರಗಿಯಲ್ಲಿರುವ ಅಂಬೇಡ್ಕರ್‌ ಪುತ್ಥಳಿಗೆ ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್ ಮಾಲಾರ್ಪಣೆ ಮಾಡಿದರು. ಉದಯ ಬಿ. ಪಾಟೀಲ, ಶರಣು ಭೂಸನೂರ, ಸತೀಶ ಸಾಹು, ನೀಲಕಂಠ ಅವಂಟಿ ಇದ್ದರು    

ಕಲಬುರಗಿ: ನಗರಲ್ಲಿ ವಿವಿಧ ಸರ್ಕಾರಿ ಕಚೇರಿ, ಸಂಘ–ಸಂಸ್ಥೆ, ಶಾಲೆ–ಕಾಲೇಜುಗಳಲ್ಲಿ ಶನಿವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 69ನೇ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮಗಳು ನಡೆದವು. 

ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ವಿವಿಧ ಇಲಾಖೆ ಅಧಿಕಾರಿಗಳು ಮಾಲಾರ್ಪಣೆ ಮಾಡಿದರು.

ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್‌ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಭಂತೇ ವರಜ್ಯೋತಿ, ಎಸ್‍ಸಿ, ಎಸ್‍ಟಿ ನೌಕರರ ಸಂಘದ ಅಧ್ಯಕ್ಷ ಮಹೇಶ ಹುಬ್ಬಳ್ಳಿ ಸೇರಿದಂತೆ ಹಲವಾರು ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ ತ್ರಿವರ್ಣ ಧ್ವಜ ಮತ್ತು ನೀಲಿ ಧ್ವಜಾರೋಹಣ ಮಾಡಲಾಯಿತು.

ಪ್ರಕಾಶ ಹದಿನೂರು, ವಿಠ್ಠಲ್.ಎಸ್.ಗೋಳಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಗಣ್ಯರು ಭಾಗವಹಿಸಿದ್ದರು.

ಶನಿವಾರ ಪೂರ್ತಿ ನಗರದ ಜಗತ್‌ ವೃತ್ತದ ಬಳಿಯ ಅಂಬೇಡ್ಕರ್‌ ಪುತ್ಥಳಿಗೆ ವಿವಿಧ ಸಂಘ–ಸಂಸ್ಥೆಗಳ ಮುಖಂಡರು, ಸಮಾಜದ ಮುಖಂಡರು ಮಾಲಾರ್ಪಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.