ADVERTISEMENT

ಅಂಬೇಡ್ಕರ್ ಪ್ರತಿಮೆಗೆ ಅವಮಾನ: ಕಲಬುರಗಿಯ ದಸ್ತಾಗಿರಿ ಗ್ರಾಮ ಉದ್ವಿಗ್ನ

​ಪ್ರಜಾವಾಣಿ ವಾರ್ತೆ
Published 25 ಮೇ 2019, 9:00 IST
Last Updated 25 ಮೇ 2019, 9:00 IST
   

ಕಲಬುರ್ಗಿ: ಕಮಲಾಪುರ ತಾಲ್ಲೂಕು ದಸ್ತಾಪುರ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಸೆಗಣಿ ಎರಚಿದ್ದಾರೆ.

‘ಘಟನೆಯಿಂದಾಗಿಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಷಯ ಅರಿತು ಸ್ಥಳದಲ್ಲಿ ಜಮಾಯಿಸಿದ ದಲಿತ ಸಂಘಟನೆಗಳ ಯುವಕರು ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಬಳಿಕ ಅಂಗಡಿ ಮುಂಗಟ್ಟುಗಳಿಗೆ ಕಲ್ಲು ಎಸೆದರು. ಬೀದಿ ಬೀದಿಯಲ್ಲಿ ಗಲಾಟೆ ಮಾಡಿ 2–3 ಬೈಕ್‌ಗಳನ್ನು ಜಖಂಗೊಳಿಸಿದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.