ADVERTISEMENT

ಪರಿನಿರ್ವಾಣ: ಯಾತ್ರಾ ಸ್ಥಳವಾದ ಕಲಬುರಗಿ ಅಂಬೇಡ್ಕರ್ ಪ್ರತಿಮೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 9:04 IST
Last Updated 6 ಡಿಸೆಂಬರ್ 2021, 9:04 IST
 ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 
ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.    

ಕಲಬುರಗಿ: ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣದ ಪ್ರಯುಕ್ತ ಇಲ್ಲಿನ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಆವರಣವು ಯಾತ್ರಾ ಸ್ಥಳವಾಗಿ ಬದಲಾಗಿದೆ.

ನಗರ ಹಾಗೂ ಜಿಲ್ಲೆಯ ‌ವಿವಿಧ ಭಾಗಗಳಿಂದ ಅಂಬೇಡ್ಕರ್ ಅವರ ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ಪ್ರತಿಮೆಗೆ ನಮನ ಸಲ್ಲಿಸುತ್ತಿದ್ದಾರೆ. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರತಿಮೆ ಎದುರಿನ ಭಾವಚಿತ್ರಕ್ಕೆ ಮೇಣದ ಬತ್ತಿಗಳನ್ನು ಬೆಳಗಿದರು.

ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ADVERTISEMENT

ಕಲಬುರಗಿ ಬೌದ್ಧ ವಿಹಾರದ ಸಂಗಾನಂದ ಭಂತೇಜಿ, ಎಸ್ಪಿ ಇಶಾ ಪಂತ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಡಿಸಿಪಿ ಅಡ್ಡೂರು ಶ್ರೀನಿವಾಸಲು ಈ ಸಂದರ್ಭದಲ್ಲಿ ಇದ್ದರು.

ಕಲಾವಿದರು ಅಂಬೇಡ್ಕರ್ ಅವರ ಜೀವನಗಾಥೆಯನ್ನು ಆಧರಿಸಿದ ಭಜನಾ ಪದಗಳನ್ನು ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.