ADVERTISEMENT

ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಪ್ರಕರಣ: ಆರೋಪಿ ಕುಟುಂಬಸ್ಥರ ಮೇಲೆ ಹಲ್ಲೆ

ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಪ್ರಕರಣ: ಜಾಮೀನಿನ ಮೇಲೆ ಆರೋಪಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 1 ಮೇ 2024, 17:05 IST
Last Updated 1 ಮೇ 2024, 17:05 IST
ಅಂಬೇಡ್ಕರ್ ಪುತ್ಥಳಿ ಅಪಮಾನ ಪ್ರಕರಣದ ಆರೋಪಿಯ ಕುಟುಂಬದವರ ಮೇಲಿನ ಹಲ್ಲೆಯನ್ನು ಖಂಡಿಸಿ ಕಲಬುರಗಿಯಲ್ಲಿ ಬುಧವಾರ ಬಿಜೆಪಿ ಮುಖಂಡರು ಪ್ರತಿಭಟಿಸಿದರು.
ಅಂಬೇಡ್ಕರ್ ಪುತ್ಥಳಿ ಅಪಮಾನ ಪ್ರಕರಣದ ಆರೋಪಿಯ ಕುಟುಂಬದವರ ಮೇಲಿನ ಹಲ್ಲೆಯನ್ನು ಖಂಡಿಸಿ ಕಲಬುರಗಿಯಲ್ಲಿ ಬುಧವಾರ ಬಿಜೆಪಿ ಮುಖಂಡರು ಪ್ರತಿಭಟಿಸಿದರು.   

ಕಲಬುರಗಿ: ಕೋಟನೂರ (ಡಿ) ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣದ ಆರೋಪಿಯೊಬ್ಬ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಂಗಳವಾರ ರಾತ್ರಿ ಗುಂಪೊಂದು ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಿದೆ. ಇದನ್ನು ಖಂಡಿಸಿ ಕುಟುಂಬದವರು ಹಾಗೂ ಬಿಜೆಪಿಯ ಮುಖಂಡರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

‘ಜನವರಿ 23ರಂದು ಪುತ್ಥಳಿಗೆ ಅಪಮಾನಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ಪೈಕಿ ಸಂಗಮೇಶ ಪಾಟೀಲ ಅವರು ಮಂಗಳವಾರ ಜಾಮೀನಿನ ಮೇಲೆ ಹೊರಬಂದರು. ಸಂಗಮೇಶ ಅವರನ್ನು ಹುಡುಕಿಕೊಂಡು ಆತನ ಮನೆಗೆ ಬಂದ ಗುಂಪೊಂದು ಕುಟುಂಬದವರ ಮೇಲೆ ಹಲ್ಲೆ ಮಾಡಿದೆ. ಸಂಗಮೇಶ ಮನೆಯಲ್ಲಿ ಇಲ್ಲ ಎಂದರೂ ದಾಂದಲೆ ನಡೆಸಿದ್ದಾರೆ. ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಸಂಗಮೇಶ ಅವರ ಸಹೋದರ ಶಿವಕುಮಾರ ಆರೋಪಿಸಿದರು.

ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿದ ಕುಟುಂಬಸ್ಥರು, ವೀರಶೈವ ಲಿಂಗಾಯತ ಕೆಲ ಮುಖಂಡರು, ಬಿಜೆಪಿಯ ನಾಯಕರು ಸುಮಾರು ಮೂರೂವರೆ ಗಂಟೆ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.  ಕಲಬುರಗಿ–ಜೇವರ್ಗಿ ರಸ್ತೆಯಲ್ಲಿ ಪ್ರತಿಭಟನೆ ನಡೆಯಿತು.

ADVERTISEMENT

ಕುಸಿದುಬಿದ್ದ ಸಂಸದ:

ಪ್ರತಿಭಟನೆಯ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ಸುಮಾರು ಒಂದು ಗಂಟೆ ಕಾಲ ವಾಗ್ವಾದ, ತಳ್ಳಾಟ ಜೋರಾಗಿ ನಡೆಯಿತು. ತಾಪಮಾನವು ಸುಮಾರು 44 ಡಿಗ್ರಿ ಸೆಲ್ಸಿಯಸ್‌ ಇತ್ತು. ಜೊತೆಗೆ ತಳ್ಳಾಟದಿಂದ ಬಸವಳಿದ ಸಂಸದ ಡಾ.ಉಮೇಶ ಜಾಧವ ಅವರು ತಲೆ ಸುತ್ತಿ ರಸ್ತೆಯಲ್ಲೇ ಕುಸಿದು ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

‘ಪ್ರಕರಣದ ಸಂಬಂಧ ಈಗಾಲೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಲಬುರಗಿಯಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ತಲೆ ಸುತ್ತಿ ಕುಸಿದುಬಿದ್ದ ಸಂಸದ ಡಾ.ಉಮೇಶ ಜಾಧವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.