ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಮೇ 13ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಮೆ ಅನಾವರಣ ಸಮಿತಿ ಅಧ್ಯಕ್ಷ ಮಾಣಿಕರಾವ ಆರ್. ಗುಲಗಂಜಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಸುಲೇಪೇಟ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಂಜೆ 4.30ಕ್ಕೆ ಪ್ರತಿಮೆ ಅನಾವರಣ ಮತ್ತು ಸಂಜೆ 5 ಗಂಟೆಗೆ ಬಹಿರಂಗ ಸಭೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.
‘ಮೂರ್ತಿ ಅನಾವರಣ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಅಣದೂರ ಬುದ್ಧವಿಹಾರದ ಭಂತೆ ಜ್ಞಾನಸಾಗರ, ಹಾಲಹಳ್ಳಿ (ಕೆ) ಬುದ್ಧವಿಹಾರದ ಭಂತೆ ಧಮ್ಮದೀಪ ದೇವನಾಮ ಪ್ರಿಯ ವಹಿಸಲಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅವಿನಾಶ ಜಾಧವ, ಜಗದೇವ ಗುತ್ತೇದಾರ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.
ಮಲ್ಲಿಕಾರ್ಜುನ ಪಾಳಾದಿ, ರುದ್ರಮನಿ ರಾಮತೀರ್ಥಕರ, ಮಲ್ಲಿಕಾರ್ಜುನ ಗುಲಗಂಜಿ, ಮಹೇಶ ಗುಲಗಂಜಿ ಗೋಷ್ಠಿಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.