ADVERTISEMENT

ಕಲಬುರಗಿ: ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿ ವಶ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 7:23 IST
Last Updated 26 ಜುಲೈ 2025, 7:23 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಭೂಸಣಗಿ ಹತ್ತಿರ ಪಡಿತರ ಅಕ್ಕಿ ತುಂಬಿದ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.

ಐಷರ್‌ ಲಾರಿಯಲ್ಲಿ ಸುಮಾರು 200 ಪ್ಯಾಕೆಟ್ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದು, ವಾಹನ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಎಂಎಚ್‌ 25, ಯು–0298 ಸಂಖ್ಯೆಯ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

‘ಹೊಲದ ಕಪ್ಪು ಮಣ್ಣಿನಲ್ಲಿ ಲಾರಿ ಸಿಕ್ಕಿಹಾಕಿಕೊಂಡಿದ್ದು, ಮಳೆ ಬರುತ್ತಿರುವ ಕಾರಣ ಅಕ್ಕಿ ಮೂಟೆಗಳ ಸಂಖ್ಯೆ ಗೊತ್ತಾಗಿಲ್ಲ. ಅದನ್ನು ಅನ್‌ಲೋಡ್‌ ಮಾಡಿದ ನಂತರ ನಿಖರ ಮಾಹಿತಿ ತಿಳಿದುಬರಲಿದೆ. ಲಾರಿ ಯಾರದ್ದು ಮತ್ತು ಅಕ್ಕಿಯನ್ನು ಯಾರು ಸರಬರಾಜು ಮಾಡುತ್ತಿದ್ದರು ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಭೀಮರಾಯ ‘ಪ್ರಜಾವಾಣಿ’ಗೆ ತಿಳಿಸಿದರು.

ಆಹಾರ ಇಲಾಖೆಯ ಶಿರಸ್ತೇದಾರರು, ನಿರೀಕ್ಷಕರು ಮತ್ತು ಪೊಲೀಸ್‌ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.