ಚಿಂಚೋಳಿ: ತಾಲ್ಲೂಕಿನ ಕೊರಡಂಪಳ್ಳಿ ಗ್ರಾಮದ ಅಪರ್ಣ ರಾಜಕುಮಾರ ಹಡಪದ 3000 ಮತ್ತು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸಿಬಿಎಸ್‌ಸಿ ಶಾಲೆಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಅಪರ್ಣ ದ್ವಿತೀಯ ಸ್ಥಾನಗಳಿಸಿದ್ದಾರೆ. ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ಸೆ.10ರಿಂದ12ವರೆಗೆ ನಡೆಯುವ ಸಿಬಿಎಸ್‌ಇ ಶಾಲೆಗಳ ರಾಷ್ಟç ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರ್ಣ ಅವರು ಹುಮ್ನಾಬಾದ ತಾಲ್ಲೂಕಿನ ಮಾಣಿಕನಗರದ ಮಾಣಿಕ ಪಬ್ಲಿಕ್ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾರೆ. ವಿದ್ಯಾಣಿಯ ಸಾಧನೆಗೆ ಕೊರಡಂಪಳ್ಳಿ ಗ್ರಾಮಸ್ಥರು ಹಾಗೂ ಶಾಲೆಯ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.