
ಯಡ್ರಾಮಿ: ತಾಲ್ಲೂಕಿನ ಕಡಕೋಳ ಗ್ರಾಮದ ಮಡಿವಾಳಪ್ಪನವರ ಮಠದಿಂದ ಪೀಠಾಧಿಪತಿ ರುದ್ರಮನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇದಿಕೆವರೆಗೆ ನೂರಾರು ಜನರು ಪಾದಯಾತ್ರೆ ಮಾಡಿ ಕಡಕೋಳ ಮಡಿವಾಳಪ್ಪನವರ ಸಂಶೋಧನಾ ಅಧ್ಯಯನ ಕೇಂದ್ರ ಸ್ಥಾಪನೆ ಮಾಡಬೇಕೆಂದು ಮನವಿ ಸಲ್ಲಿಸಿದರು.
ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಸ್ವಾಮೀಜಿ ಅವರನ್ನು ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಅವರ ಬಳಿ ಕರೆತಂದು ಅಧ್ಯಯನ ಕೇಂದ್ರದ ಬೇಡಿಕೆ ಬಗ್ಗೆ ಗಮನ ಸೆಳೆದರು.
ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರ ಗಮನ ಸೆಳೆದಿದ್ದರು. ಮುಖ್ಯಮಂತ್ರಿ ಅವರು ತಮ್ಮ ಭಾಷಣದಲ್ಲಿ ಶಿಕ್ಷಕರ ನೇಮಕಾತಿ ಹಾಗೂ ಮಡಿವಾಳಪ್ಪನವರ ತತ್ವಪದಗಳ ಸಂಶೋಧನಾ ಕೇಂದ್ರದ ಬಗ್ಗೆ ಪ್ರಸ್ತಾಪಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಆ ಬಗ್ಗೆ ಯಾವುದೇ ಪ್ರಸ್ತಾಪ ಮಾಡಲಿಲ್ಲ.
ಸ್ವಾಮೀಜಿ ಅವರು ತಂದಿದ್ದ ಹಾರ ಹಾಗೂ ಭಾವಚಿತ್ರವನ್ನು ಮುಖ್ಯಮಂತ್ರಿ ಪಡೆಯಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.