ADVERTISEMENT

ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 26 ಮೇ 2025, 13:07 IST
Last Updated 26 ಮೇ 2025, 13:07 IST
ದಾನಪ್ಪಗೌಡ ಹಳಿಮನಿ
ದಾನಪ್ಪಗೌಡ ಹಳಿಮನಿ   

ಜೇವರ್ಗಿ: ‘2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚಿನ ಅಂಕ ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ’ ಎಂದು ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದಾನಪ್ಪಗೌಡ ಹಳಿಮನಿ ತಿಳಿಸಿದ್ದಾರೆ.

‘ಪ್ರತಿ ವರ್ಷ ಸಂಘದಿಂದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಪೋಷಕರು ಕಾಯಂ ಸರ್ಕಾರಿ ನೌಕರರಾಗಿರಬೇಕು ಹಾಗೂ ಸಂಘದ ಸದಸ್ಯರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರಿಂದ ದೃಢೀಕರಿಸಿ ಆನ್‌ಲೈನ್‌ನಲ್ಲಿ ನಮೂದಿಸಬೇಕು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ವೆಬ್‌ಸೈಟ್ https://ksgeanews.blpgsppt.cpm ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 99725 64999 ಸಂಪರ್ಕಿಸಬಹುದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT