ಕಲಬುರ್ಗಿ: ಇಲ್ಲಿನ ರೋಜಾ ಪೊಲೀಸ್ ಠಾಣೆಯ ಎಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ಬಾಸ್ ಅಲಿ (58) ಅನಾರೋಗ್ಯದಿಂದ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಅಬ್ಬಾಸ್ ಅಲಿ ಕಳೆದ ಎರಡು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವಿಗೂ ಮುನ್ನ ಕೊರೊನಾ ಪರೀಕ್ಷೆಗಾಗಿ ಅವರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಇನ್ನೂ ವರದಿ ಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು
ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರ ಕೊರೊನಾ ನಿಮಯಾವಳಿ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದಕ್ಕೂ ಮುನ್ನ ಪೊಲೀಸ್ ಠಾಣೆ ಎದುರು ಅವರ ಪಾರ್ಥಿವ ಶರೀರ ಇಟ್ಟು ಅಂತಿಮ ಗೌರವ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.