
ಪ್ರಜಾವಾಣಿ ವಾರ್ತೆಆಳಂದ: ತಾಲ್ಲೂಕಿನ ಮುನ್ನೋಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ವ್ಯಕ್ತಿ ಭಾನುವಾರ ಮೃತಪಟ್ಟಿದ್ದಾರೆ.
ಮುನ್ನೋಳ್ಳಿಯ ನಿವಾಸಿ ಹೀರಾಲಾಲ್ ಹುಸ್ಮಾನಸಾಬ ನದಾಫ್ (38)ಮೃತರು. ಮೇ 24ರಂದು ಗ್ರಾಮದ ಹೊರವಲಯದ ವೈನ್‌ಶಾಪ್ ಮುಂದೆ ಆರೋಪಿಗಳಾದ ರವಿ ಜಾನೆ, ಶೇಖರ್ ಜಾನೆ ಜತೆಗೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ಕಲ್ಲು, ಬಡಿಗೆಯಿಂದ ಹಲ್ಲೆ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಕಲಬುರಗಿ ಆಸ್ಪತ್ರೆಯಲ್ಲಿ ಹೀರಾಲಾಲ್ ಚಿಕಿತ್ಸೆ ಪಡೆಯುತ್ತಿದ್ದರು.
ಈತನ ಪತ್ನಿ ನೂರಜಾಬಿ ನರೋಣಾ ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಿದ್ದಾರೆ. ಅನೈತಿಕ ಸಂಬಂಧ ಕಾರಣ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.