ADVERTISEMENT

ವಿಧಾನಸಭಾಧ್ಯಕ್ಷರ ಎದುರು ವಿಚಾರಣೆಗೆ ಹಾಜರಾಗುವೆ; ಜಾಧವ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2019, 10:11 IST
Last Updated 9 ಮಾರ್ಚ್ 2019, 10:11 IST
ಡಾ.ಉಮೇಶ ಜಾಧವ
ಡಾ.ಉಮೇಶ ಜಾಧವ   

ಕಲಬುರ್ಗಿ: ‘ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯು ಕಾನೂನು ಪ್ರಕಾರ ಅಂಗೀಕಾರವಾಗುತ್ತದೆ. ಅವಶ್ಯಕತೆ ಬಿದ್ದರೆ ಮಾ.12ರಂದು ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಡಾ.ಉಮೇಶ ಜಾಧವ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶಕುಮಾರ್ ಅವರು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ, ನ್ಯಾಯಯುತವಾಗಿ ಕ್ರಮಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

‘ನನಗೆ ಇದುವರೆಗೂ ನೋಟಿಸ್ ತಲುಪಿಲ್ಲ. ಮಾಧ್ಯಮಗಳಲ್ಲಿ ನೋಡಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಪ್ರೈವೆಟ್ ಲಿಮಿಟೆಡ್ ಕಂಪನಿ: ‘ಕಲಬುರ್ಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಪ್ರೈವೆಟ್ ಲಿಮಿಟೆಡ್ ಕಂಪನಿಯಾಗಿದೆ. ತಮ್ಮ ಅನುಕೂಲಕ್ಕಾಗಿ ಅನೇಕ ನಾಯಕರನ್ನು ಪಕ್ಷದಿಂದ ಹೊರಹಾಕಿದ್ದಾರೆ’ ಎಂದು ಸಂಸದ ಮಲ್ಲಿಕಾರ್ಜುನ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

‘ಡಾ.ಉಮೇಶ ಜಾಧವ ಅಲ್ಲ, ಡಾ.ಆಮಿಷ್ ಜಾಧವ’ ಎಂಬ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಜಾಧವ, ‘ನಾನು ಬಿಜೆಪಿಯವರಿಂದ ದುಡ್ಡು ಪಡೆದಿದ್ದರೆ ಜಗತ್ತಿನ ಯಾವುದೇ ಏಜೆನ್ಸಿ ಮೂಲಕ ತನಿಖೆ ನಡೆಸಲಿ. ಅದು ಬಿಟ್ಟು ವಿನಾಕಾರಣ ಆರೋಪ ಮಾಡುವುದನ್ನು ನಿಲ್ಲಿಸಲಿ. ನನ್ನ ಬಳಿಯೂ ಅಸ್ತ್ರಗಳಿವೆ, ಮುಂದಿನ ದಿನಗಳಲ್ಲಿ ಅವುಗಳನ್ನು ಪ್ರಯೋಗಿಸುತ್ತೇನೆ’ ಎಂದು ಹೇಳಿದರು

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.