ADVERTISEMENT

ದೇವರಗುಡಿ ಅಂಗನವಾಡಿ ಕಾರ್ಯಕರ್ತೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2025, 6:09 IST
Last Updated 11 ಮಾರ್ಚ್ 2025, 6:09 IST
ರತ್ನಮ್ಮ 
ರತ್ನಮ್ಮ    

ಸಿಂಧನೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡಲಾಗುವ ‘ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ’ಗೆ ತುರ್ವಿಹಾಳ ಯೋಜನೆಯ ಹಾರಾಪುರ ವಲಯದ ದೇವರಗುಡಿ ಗ್ರಾಮದ ಅಂಗನವಾಡಿ 2ನೇ ಕೇಂದ್ರದ ಕಾರ್ಯಕರ್ತೆ ರತ್ನಮ್ಮ ಭಾಜನರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ರಾಘವೇಂದ್ರ ಮತ್ತು ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ತಿಳಿಸಿದ್ದಾರೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ತೆಗೆದುಕೊಂಡಿರುವ ಕ್ರಮಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುವ ಮೂಲಕ ಅಭಿನಂದಿಸಲಾಗಿದೆ ಎಂದು ಅವರು ಪ್ರಶಸ್ತಿ ಪತ್ರದಲ್ಲಿ ತಿಳಿಸಿದ್ದಾರೆ.

‘ಕಾರ್ಯಕರ್ತೆ ರತ್ನಮ್ಮ ಅವರು ಉತ್ತಮ ಕಾರ್ಯಕರ್ತೆ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ತುರ್ವಿಹಾಳ ಯೋಜನೆಗೆ ಗೌರವ ತಂದಿದ್ದಾರೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಶೋಕ ಅಭಿನಂದಿಸಿದ್ದಾರೆ.

ADVERTISEMENT
ಸಿಂಧನೂರು ತಾಲ್ಲೂಕಿನ ದೇವರಗುಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರತ್ನಮ್ಮ ಅವರನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.8 ರಂದು ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಇಲಾಖೆಯ ಸಚಿವೆ ಲಕ್ಷ್ಮಿ ಹಬ್ಬಾಳ್ಕರ್ ಅವರು ‘ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ’ ನೀಡಿ ಗೌರವಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.