ADVERTISEMENT

ವಿದ್ಯಾರ್ಥಿಗಳಿಗೆ ‘ಗುಣಾಗ್ರಣಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 3:51 IST
Last Updated 16 ಆಗಸ್ಟ್ 2021, 3:51 IST

ಕಲಬುರ್ಗಿ: ವಿದ್ಯಾರ್ಥಿಗಳಲ್ಲಿ ಮಾತೃ ಭಾಷಾಭಿಮಾನ ಹೆಚ್ಚಿಸಲು ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ‘ಹತ್ತರ ಕನ್ನಡಕೆ... ಗುಣಾಗ್ರಣಿ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 98803 49025 ಅಥವಾ 98865 60869 ಮೂಲಕ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT