ಕಲಬುರಗಿ: ಚನ್ನವೀರ ಶಿವಯೋಗಿಗಳ 70ನೇ ಪುಣ್ಯಸ್ಮರಣೆ ಹಾಗೂ ಶ್ರೀಶೈಲ ಸಾರಂಗ ಮಠದ ಪೀಠಾಧಿಪತಿ ಸಾರಂಗಧರ ದೇಶಿಕೇಂದ್ರ ಸ್ವಾಮಿಗಳ ಪಟ್ಟಾಧಿಕಾರ ದಶಮಾನೋತ್ಸವ, ಪೂಜ್ಯರ ಜನ್ಮ ದಿನಾಚರಣೆ ಸಮಾರಂಭವನ್ನು ಸೆ.21ರಂದು ಬೆಳಿಗ್ಗೆ 11ಕ್ಕೆ ಶಹಾಬಜಾರ್‌ದಲ್ಲಿರುವ ಸುಲಫಲ ಮಠದಲ್ಲಿ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಉಪಾಧ್ಯಕ್ಷ ದೇವೇಂದ್ರಗೌಡ ಗೌಡಗೇರಾ ತಿಳಿಸಿದ್ದಾರೆ.
ಹಾರಕೂಡದ ಚನ್ನವೀರ ಶಿವಾಚಾರ್ಯರು, ನಾಲವಾರದ ಸಿದ್ಧತೋಟೇಂದ್ರ ಶಿವಾಚಾರ್ಯರಿಗೆ ಶ್ರೀಮಠದಿಂದ ಪ್ರತಿಷ್ಠಿತ ಕಲ್ಯಾಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಿಡುಮಾಮಿಡಿಯ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮಿಗಳ ಸಾನ್ನಿಧ್ಯ, ಭಾಲ್ಕಿಯ ಬಸವಲಿಂಗ ಪಟ್ಟದ್ದೇವರ ನೇತೃತ್ವ ಹಾಗೂ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ದಾಕ್ಷಾಯಿಣಿ ಅಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ಸೊನ್ನದ ಶಿವಾನಂದ ಸ್ವಾಮೀಜಿ, ಯಡ್ರಾಮಿಯ ಸಿದ್ದಲಿಂಗ ಸ್ವಾಮೀಜಿ ಸಮ್ಮುಖ ವಹಿಸುವರು ಎಂದು ಮಾಹಿತಿ ನೀಡಿದ್ದಾರೆ.
ನೂತನ ಮಹಾದ್ವಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸುವರು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.