ADVERTISEMENT

ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 7:49 IST
Last Updated 17 ಜುಲೈ 2025, 7:49 IST
   

ಸೇಡಂ: ಬೊಮ್ಮನಳ್ಳಿ ಸುದ್ದಿ ಪ್ರತಿಷ್ಠಾನ ವತಿಯಿಂದ ಕೊಡಮಾಡುವ 16ನೇ ವರ್ಷದ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಸುದ್ದಿವಾಹಿನಿ ವರದಿಗಾರ ಅರುಣ್ ಕದಂ ಹಾಗೂ ಬೀದರ್‌ನ ಪತ್ರಕರ್ತ ಅಪ್ಪಾರಾವ್ ಸೌದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಶಿಕ್ಷಣ ತಜ್ಞ ಲಿಂ.ಶಿವಯ್ಯ ಮಠಪತಿ ಅವರ ಸ್ಮರಣಾರ್ಥ ಮೂರನೇ ವರ್ಷದ ಪ್ರಶಸ್ತಿಗೆ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗುರುಕುಲ ವಿದ್ಯಾಪೀಠದ ಬಸವರಾಜ ಡಿಗ್ಗಾವಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರತಿಷ್ಠಾನದ ಅಧ್ಯಕ್ಷ ಶಿವಯ್ಯ ಸ್ವಾಮಿ ಬಿಬ್ಬಳ್ಳಿ, ಖಜಾಂಚಿ ಸಿದ್ದಪ್ಪ ತಳ್ಳಳ್ಳಿ, ಸ್ಥಾಪಕ ಸಂಚಾಲಕ ನಾಗಯ್ಯ ಸ್ವಾಮಿ ಬೊಮ್ನಳ್ಳಿ ಹಾಗೂ ಪತ್ರಕರ್ತ ಪ್ರಭಾಕರ ಜೋಶಿ ಅವರು ಆಯ್ಕೆ ಸಮಿತಿಯಲ್ಲಿದ್ದರು. ಇದೇ ಜುಲೈ 23ರಂದು ಬೆಳಿಗ್ಗೆ 10.45ಕ್ಕೆ ಸೇಡಂ ನಗರದ ಕೊತ್ತಲ ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT