ADVERTISEMENT

ತಮಿಳ್‌ ಸೆಲ್ವಿಗೆ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 14 ಮೇ 2025, 15:53 IST
Last Updated 14 ಮೇ 2025, 15:53 IST
ಪ್ರೊ.ತಮಿಳ್ ಸೆಲ್ವಿ
ಪ್ರೊ.ತಮಿಳ್ ಸೆಲ್ವಿ   

ಕಲಬುರಗಿ: ಇಲ್ಲಿನ ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಚೆನ್ನೈನ ಮದ್ರಾಸ್‌ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕಿ, ಸಂಶೋಧಕಿ ಪ್ರೊ.ತಮಿಳ್‌ ಸೆಲ್ವಿ ಆಯ್ಕೆಯಾಗಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ನಿರ್ದೇಶಕ ಪ್ರೊ.ಎಚ್‌.ಟಿ.ಪೋತೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಶಸ್ತಿಗೆ ಸೆಲ್ವಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಜೂನ್ 5ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿಯು ₹ 10 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿದೆ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT