ಗಂಗಾವತಿ: ಇಲ್ಲಿನ ಜಯನಗರದ ಪಿಂಜಾರ ಸಮುದಾಯದವರ ಮನೆಯಲ್ಲಿ ಮಂಗಳವಾರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.
ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂಅಲಿ ಮುದ್ದಾ ಬಳ್ಳಿ ಅವರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪೂಜೆ ನಡೆಸಲು ಎಲ್ಲ ರೀತಿಯ ಪೂಜಾ ಸಾಮಗ್ರಿ ತರಿಸಿ ವ್ಯವಸ್ಥೆ ಕಲ್ಪಿಸಿ, ಸುತ್ತಮುತ್ತಲಿನ ಜನರಿಗೆ ಪೂಜೆಗೆ ಬರುವಂತೆ ಮಾಹಿತಿ ನೀಡಿದ್ದರು. ಇದರನ್ವಯ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಬೆಳಿಗ್ಗೆ ತಂಡದೊಂದಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ, ಅಯ್ಯಪ್ಪ ಸ್ವಾಮಿ ಸ್ಮರಣೆ ಮಾಡಿದರು. ನಂತರ ಎಲ್ಲ ಮಾಲಾಧಾರಿಗಳು ಪ್ರಸಾದ ಸೇವಿಸಿದ ಬಳಿಕ ಸನ್ಮಾನಿಸಿ ಬೀಳ್ಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.