ADVERTISEMENT

76ನೇ ಸ್ವಾತಂತ್ರ್ಯೋತ್ಸವ: ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ನಿರಾಣಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 4:24 IST
Last Updated 15 ಆಗಸ್ಟ್ 2022, 4:24 IST
ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ‌ಜಿಲ್ಲಾ ಉಸ್ತುವಾರಿ ‌ಸಚಿವ ಮುರುಗೇಶ ನಿರಾಣಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು
ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ‌ಜಿಲ್ಲಾ ಉಸ್ತುವಾರಿ ‌ಸಚಿವ ಮುರುಗೇಶ ನಿರಾಣಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು   

ಕಲಬುರಗಿ: ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಧ್ವಜಾರೋಹಣ ನೆರವೇರಿಸಿದರು.

ನಂತರ ಪೊಲೀಸ್, ಅಗ್ನಿಶಾಮಕ, ಅರಣ್ಯ, ಕೇಂದ್ರ ಕಾರಾಗೃಹ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ವಿವಿಧ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಸಂಸಡ ಡಾ.ಉಮೇಶ ಜಾಧವ, ವಿಧಾನ ಪರಿಷತ್ ಶಾಸಕ ಸುನೀಲ್ ವಲ್ಯಾಪೂರೆ, ಸಾರಿಗೆ ಇಲಾಖೆಯ ಸರ್ಕಾರದ ಪ್ರಧಾನ‌ ಕಾರ್ಯದರ್ಶಿ ಮತ್ತು ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಐಜಿಪಿ ಮನೀಷ್ ಖರ್ಬಿಕರ್, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಕಲಬುರಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್, ಎಸ್.ಪಿ.ಇಶಾ ಪಂತ್, ಜಿಲ್ಲಾ ಪಂಚಾಯಿತಿ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತೆ ಗರಿಮಾ ಪನ್ವಾರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ರಾಚಪ್ಪ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಎಡಿಸಿ ಭೀಮಾಶಂಕರ ತೆಗ್ಗೆಳ್ಳಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.