ADVERTISEMENT

ಬಾಬಾಸಾಹೇಬರೆಡೆಗೆ: ಮಲ್ಲಿಕಾರ್ಜುನ ಖರ್ಗೆ ಜೀವನ ಚರಿತ್ರೆ ಕೃತಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 6:04 IST
Last Updated 21 ಜುಲೈ 2021, 6:04 IST
ಪುಸ್ತಕದ ಮುಖಪುಟ
ಪುಸ್ತಕದ ಮುಖಪುಟ   

ಕಲಬುರ್ಗಿ: ಇಲ್ಲಿನ ಕುಟುಂಬ ಪ್ರಕಾಶನದಿಂದ ಹೊರತಂದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಾಗಿ ಗುಲಬರ್ಗಾ ವಿ.ವಿ. ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಚ್‌.ಟಿ. ಪೋತೆ ಅವರು ಬರೆದ ‘ಬಾಬಾಸಾಹೇಬರೆಡೆಗೆ’ ಜೀವನ ಕಥನ (ಪರಿಷ್ಕೃತ ಮುದ್ರಣ) ಜುಲೈ21ರಂದು ಖರ್ಗೆ ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಬಿಡುಗಡೆಯಾಗಲಿದೆ.

ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅವರು ಕೃತಿಯನ್ನು ಲೋಕಾರ್ಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಭಾಗವಹಿಸುವರು.

ಅಧ್ಯಕ್ಷತೆಯನ್ನು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ವಹಿಸುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.