ADVERTISEMENT

ಕಲಬುರಗಿ | ಬಾಬರಿ ಮಸೀದಿ ಧ್ವಂಸದ ಸ್ಟೇಟಸ್‌: ಪಾಲಿಕೆ ಸಿಬ್ಬಂದಿ ವಿರುದ್ಧ ಎಫ್ಐಆರ್

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 17:19 IST
Last Updated 6 ಡಿಸೆಂಬರ್ 2025, 17:19 IST
   

ಕಲಬುರಗಿ: ಬಾಬರಿ ಮಸೀದಿ ಧ್ವಂಸ ಮಾಡುತ್ತಿರುವ ಕುರಿತ ವಿಡಿಯೊವೊಂದನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ ಇಟ್ಟುಕೊಂಡಿದ್ದ ಮಹಾನಗರ ಪಾಲಿಕೆ ಕಚೇರಿ ವ್ಯವಸ್ಥಾಪಕ ಅಂಬಾದಾಸ ಅವರ ವಿರುದ್ಧ ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

‘ಮುಸ್ಲಿಂ ಸಮುದಾಯದವರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ‘ಬನಾಯೆಂಗೆ ಮಂದಿರ್’ ಹಾಡಿನೊಂದಿಗೆ ಪಾಲಿಕೆ ಅಧಿಕಾರಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಇಟ್ಟುಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಮುದಾಯದ ಮುಖಂಡ ಅಜಮಲ್‌ ಗೋಲಾ ಠಾಣೆಗೆ ದೂರು ನೀಡಿದ್ದಾರೆ. ಎಫ್‌ಐಆರ್‌ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT