ADVERTISEMENT

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ಸಾಧ್ಯ; ಬಿ.ಆರ್. ಪಾಟೀಲ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 1:05 IST
Last Updated 29 ಏಪ್ರಿಲ್ 2022, 1:05 IST
ಆಳಂದದ ಲಿಂಗಾಯತ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಜಗಜೀವನರಾಮ್ ಜಯಂತಿ ಕಾರ್ಯಕ್ರಮವನ್ನು ಬಿ.ಆರ್. ಪಾಟೀಲ ಉದ್ಘಾಟಿಸಿದರು. ಅಭಿನವ ಶಿವಲಿಂಗ ಸ್ವಾಮೀಜಿ, ವಿಜಯಕುಮಾರ ರಾಮಕೃಷ್ಣ ಇದ್ದರು
ಆಳಂದದ ಲಿಂಗಾಯತ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಜಗಜೀವನರಾಮ್ ಜಯಂತಿ ಕಾರ್ಯಕ್ರಮವನ್ನು ಬಿ.ಆರ್. ಪಾಟೀಲ ಉದ್ಘಾಟಿಸಿದರು. ಅಭಿನವ ಶಿವಲಿಂಗ ಸ್ವಾಮೀಜಿ, ವಿಜಯಕುಮಾರ ರಾಮಕೃಷ್ಣ ಇದ್ದರು   

ಆಳಂದ: ಶಿಕ್ಷಣದಿಂದ ಮಾತ್ರ ಶೋಷಿತ ಹಾಗೂ ಅವಕಾಶ ವಂಚಿತ ಸಮುದಾಯಗಳಲ್ಲಿ ಪರಿವರ್ತನೆ ಸಾಧ್ಯ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಅಭಿಪ್ರಾಯಪಟ್ಟರು.

ಪಟ್ಟಣದ ಲಿಂಗಾಯತ ಭವನದಲ್ಲಿ ಗುರುವಾರ ತಾಲ್ಲೂಕು ಮಾದಿಗ ಸಮಾಜ ಹಾಗೂ ಜಯಂತ್ಯುತ್ಸವ ಸಮಿತಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಂ ಜಯಂತಿ ಕಾಯರ್ಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.

ಜಗಜೀವನರಾಂ ಅವರು ದೇಶದ ಅಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮೂಲಕ ಬಡತನ ತೊಲುಗಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ ಎಂದರು.

ADVERTISEMENT

ಬೆಂಗಳೂರಿನ ಚಿಂತಕ ಪ್ರೊ.ಹರಿರಾಮ್ ಮಾತನಾಡಿ, ಡಾ.ಅಂಬೇಡ್ಕರ್ ಹಾಗೂ ಡಾ. ಜಗಜೀವನರಾಂ ಅವರು ಶೋಷಿತರ ಕಲ್ಯಾಣಕ್ಕೆ ಶ್ರಮಿಸಿದ ನಾಯಕರು. ಅವರ ವಿಚಾರಧಾರೆಗಳನ್ನು ಅಳವಡಿಸಿ ಕೊಳ್ಳುವುದು ಅವಶ್ಯ ಎಂದರು.

ಬಿಜೆಪಿ ಮುಖಂಡ ಭೀಮಾಶಂಕರ ಪಾಟೀಲ ಮಾತನಾಡಿ, ಡಾ.ಬಾಬೂ ಅವರು ದೇಶದ ಪ್ರಗತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ನಿರಗುಡಿ ಹವಾ ಮಲ್ಲಿನಾಥ ಮಹಾರಾಜರು ಹಾಗೂ ಮಾದನ ಹಿಪ್ಪರಗಿ ಅಭಿನವ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಮೇಶ ಲೋಹಾರ, ಅಂಬರಾಯ ಚಲಗೇರಾ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಲಚಂದ್ರ ಸೂರ್ಯವಂಶಿ, ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ಗುರುಶರಣ ಪಾಟೀಲ, ವೈಜುನಾಥ ಝಳಕಿ, ಮಹಾಂತಪ್ಪ ಸಾಲೇಗಾಂವ, ಪುರಸಭೆ ಸದಸ್ಯ ಸಂದೀಪ ಪಾತ್ರೆ, ಚೆನ್ನಪ್ಪ ಮಾದನ ಹಿಪ್ಪರಗಿ, ರಾಜೇಂದ್ರ ಪಡಸಾವಳಿ, ರಾಜೇಂದ್ರ ಕಟ್ಟಿಮನಿ, ಬಸಣ್ಣಾ ಕಟ್ಟಿಮನಿ ಇದ್ದರು.

ಮಾದಿಗ ಸಮಾಜದ ವಿವಿಧ ಗ್ರಾಪಂ ಸದಸ್ಯರು, ಪುರಸಭೆ ಸದಸ್ಯರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.