ADVERTISEMENT

ಡಾ: ಬಾಬೂಜಿ ಪುಣ್ಯತಿಥಿ: ಗೌರವ ನಮನ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 3:56 IST
Last Updated 7 ಜುಲೈ 2022, 3:56 IST
ಕಲಬುರಗಿ ನಗರದಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ಪುಣ್ಯತಿಥಿ ಪ್ರಯುಕ್ತ ಬುಧವಾರ ಬಾಬೂಜಿ ಪ್ರತಿಮೆಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಪೂಜೆ ಸಲ್ಲಿಸಿದರು
ಕಲಬುರಗಿ ನಗರದಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ಪುಣ್ಯತಿಥಿ ಪ್ರಯುಕ್ತ ಬುಧವಾರ ಬಾಬೂಜಿ ಪ್ರತಿಮೆಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಪೂಜೆ ಸಲ್ಲಿಸಿದರು   

ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 36ನೇ ಪುಣ್ಯತಿಥಿ ಪ್ರಯುಕ್ತ ಬುಧವಾರ ನಗರದ ಟೌನ್ ಹಾಲ್ ಬಳಿ ಪ್ರತಿಮೆಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ. ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ವರ ಪಾಟೀಲ ದೇವಿದಾಸ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ. ಎಸ್. ಅಲ್ಲಾಭಕಷ್ ಸೇರಿದಂತೆ ಸಮಾಜದ ಮುಖಂಡರು, ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT