
ಕಲಬುರಗಿ: ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಜ. 3ರಿಂದ 6ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಪುರುಷರ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ತಂಡ ಭಾಗವಹಿಸಲಿದೆ.
ತಂಡದ ನಾಯಕ ಸಾಬಯ್ಯ ನೇತೃತ್ವದಲ್ಲಿ ಐವರು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ತಂಡದ ವ್ಯವಸ್ಥಾಪಕ, ತರಬೇತಿದಾರರಾಗಿ ದೈಹಿಕ ಶಿಕ್ಷಣ ವಿಭಾಗದ ತಾಂತ್ರಿಕ ಸಹಾಯಕ ಡಿ. ಪ್ರಶಾಂತಕುಮಾರ್ ಭಾಗವಹಿಸುವರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಕುಲಸಚಿವ ಪ್ರೊ. ರಮೇಶ್ ಲಂಡನಕರ್, ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಜಿ. ಕಣ್ಣೂರ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಹಾಗೂ ಪ್ರಾಂಶುಪಾಲ ಪ್ರೊ. ಎಸ್.ಎಚ್. ಜಂಗೆ, ಪ್ರೊ. ಚಂದ್ರಕಾಂತ ಬಿರಾದಾರ, ಅರುಣ್ ಕುಮಾರ್ ಎಚ್. ಅವರು ಬ್ಯಾಡ್ಮಿಂಟನ್ ತಂಡಕ್ಕೆ ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.