ಸೇಡಂ: ‘ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆ ಭ್ರಷ್ಟಾಚಾರ, ಲಂಚಗುಳಿತನದಿಂದ ಗಬ್ಬುನಾರುತ್ತಿದೆ’ ಎನ್ನುವುದನ್ನು ಕಾಂಗ್ರೆಸ್ ಸಚಿವರು, ಶಾಸಕರೇ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ. ಸಚಿವ ಜಮೀರ್ ಅಹ್ಮದ್ ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರೇ ಬಹಿರಂಗ ಪಡಿಸಿದ್ದು, ಸಚಿವ ಜಮೀರ್ ಅಹ್ಮದ್ ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಆಡಳಿತದಲ್ಲಿ ಮಂತ್ರಿ, ಶಾಸಕರುಗಳ ಪರಿಸ್ಥಿತಿಯೇ ಈ ರೀತಿಯಾದರೆ, ಇನ್ನು ಜನಸಾಮಾನ್ಯರ ಸ್ಥಿತಿ ಕಲ್ಪನಾತೀತವಾಗಿದೆ. ಕಾನೂನು, ಸುವ್ಯವಸ್ಥೆ, ಆರ್ಥಿಕ ಸ್ಥಿತಿ, ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿದೆ, ಇಂತಹ ಜನದ್ರೋಹಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಗ್ಗೆ ಜನ ಹಾದಿ -ಬೀದಿಗಳಲ್ಲಿ ಶಪಿಸುತ್ತಿದ್ದಾರೆ. ಸದ್ಯದಲ್ಲೇ ಜೆಡಿಎಸ್ ಪಕ್ಷ ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ, ಲಂಚಪೀಡನೆಯ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.