ADVERTISEMENT

ಜೇವರ್ಗಿ: ಬಾಂಗ್ಲಾದೇಶ ಹಿಂಸಾಚಾರ ಘಟನೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 6:06 IST
Last Updated 27 ಡಿಸೆಂಬರ್ 2025, 6:06 IST
ಜೇವರ್ಗಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಬಾಂಗ್ಲಾದೇಶದ ಘಟನೆ ಖಂಡಿಸಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಜೇವರ್ಗಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಬಾಂಗ್ಲಾದೇಶದ ಘಟನೆ ಖಂಡಿಸಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.   

ಜೇವರ್ಗಿ: ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹತ್ಯೆ ಮತ್ತು ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ತಾಲ್ಲೂಕು ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಟೈರ್‌ಗಳಿಗೆ ಬೆಂಕಿ‌ ಹಚ್ಚಿ ಪ್ರತಿಭಟನಾಕಾರರು ಬಾಂಗ್ಲಾ ದೇಶದ ವಿರುದ್ಧ ಸಾಲು ಸಾಲು ಘೋಷಣೆಗಳನ್ನು ಕೂಗಿದರು. ‘ಬಾಂಗ್ಲಾ, ಪಾಕಿಸ್ತಾನ ಇತರ ದೇಶಗಳಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಬಾಂಗ್ಲಾ ಮತ್ತು ಪಾಕಿಸ್ತಾನಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಹಿಂದು ಮಹಿಳೆಯರ ಮೇಲೆ ಅತ್ಯಾಚಾರ, ಮತಾಂತರ, ಬಲವಂತದ ಮದುವೆ, ಹಲ್ಲೆ, ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಕೇಂದ್ರ ಸರ್ಕಾರ ಸಂಬಂಧಿಸಿದ ದೇಶಗಳ ಮುಖ್ಯಸ್ಥರ ಜತೆ ಚರ್ಚಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು. ಭಾರತದಲ್ಲಿ ಅಲ್ಪಸಂಖ್ಯಾತರನ್ನು ಓಲೈಸುವ ಪ್ರವೃತ್ತಿ ನಿಲ್ಲಬೇಕು’ ಎಂದು ಮುಖಂಡ ಭಾಗೇಶ ಹೋತಿನಮಡು ಒತ್ತಾಯಿಸಿದರು.

ADVERTISEMENT

‘ಬಾಂಗ್ಲಾ ದೇಶದಲ್ಲಿ ದೀಪಕ್‌ ಚಂದ್ರದಾಸ್ ಹತ್ಯೆ ಅಲ್ಲಿನ ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಹಿಂದುಗಳು ಮನೆಯಿಂದ ಹೊರಗೆ ಬಾರದ ಆತಂಕದ ಸ್ಥಿತಿ ನಿರ್ಮಾಣವಾಗಿದೆ’ ಎಂದರು.

ಈ ಸಂದರ್ಭದಲ್ಲಿ ಬಜರಂಗದಳದ ಬಸವರಾಜ ಸೂಗೂರ, ಈಶ್ವರ ಹಿಪ್ಪರಗಿ, ಸಾಹೇಬಗೌಡ ಕಡ್ಲಿ, ವೀರೇಶ ಕಲ್ಲೂರ, ಗುಂಡು ಹಿರೇಗೌಡ, ಶಂಕರ ಮಲ್ಲಾಡ, ಮೌನೇಶ ಭಜಂತ್ರಿ, ಶಿವರಾಯ ಕುಮ್ಮನಸಿರಸಗಿ, ಹೇಮಂತ ಲಿಂಗಸೂಗೂರ, ಹಣಮಂತ ಬಗಲಿ, ಸಾಯಬಣ್ಣ ನಾಟೀಕಾರ, ಮರೆಪ್ಪ ಕೋಳಕೂರ ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.